ಪೆರುವಾಜೆ: ಶ್ರೀ ಕ್ಷೇತ್ರ ಧ.ಗ್ರಾ.ಯೋ. ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧ.ಗ್ರಾ.ಯೋ. ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಆ. 26ರಂದು ಪೆರುವಾಜೆ ಕಾರ್ಯಕ್ಷೇತ್ರದಲ್ಲಿ ನಡೆಯಿತು.
ಒಕ್ಕೂಟದ ಅಧ್ಯಕ್ಷ ಸುಂದರ ನಾಯ್ಕ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಜಯ್, ಶಾಲಾ ಮುಖ್ಯೋಪಾಧ್ಯಾಯಿನಿ ಶೃತಿ, ಪೆರುವಾಜೆ ಜಲದುರ್ಗಾ ದೇವಿ ದೇವಸ್ಥಾನದ ಅಧ್ಯಕ್ಷ ಪದ್ಮನಾಭ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿ ಪರಿಸರ ಜಾಗೃತಿಯ ಬಗ್ಗೆ ಮಾತನಾಡಿದರು. ಕೃಷಿ ಅಧಿಕಾರಿ ರಮೇಶ್ ಪ್ರಾಸ್ತವಿಕವಾಗಿ ಮಾತನಾಡಿ ಪರಿಸರದ ಬಗ್ಗೆ, ನಾವು ಸೇವಿಸುವ ಆಹಾರದ ಬಗ್ಗೆ, ಸ್ವಚ್ಛತೆಯ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಸವಿತ, ವಲಯ ಮೇಲ್ವಿಚಾರಕರಾದ ತೀರ್ಥರಾಮ, ಸೇವಾಪ್ರತಿನಿಧಿ ಪ್ರಿಯಾ ಕೆ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಪ್ರಿಯಾ ಕೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರುತಿ ಸ್ವಾಗತಿಸಿ, ಮೇಲ್ವಿಚಾರಕರಾದ ತೀರ್ಥರಾಮ ವಂದಿಸಿದರು.