ಡಾ. ಮೀರಾಮಣಿಯವರಿಗೆ 2025ರ ರಾಷ್ಟ್ರೀಯ ಅತ್ಯುತ್ತಮ ಗ್ರಂಥಪಾಲಕ ಪ್ರಶಸ್ತಿ

0

ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಗ್ರಂಥಪಾಲಕಿ ಡಾ. ಮೀರಾಮಣಿ ಯವರಿಗೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವೃತ್ತಿಗೆ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಗುರುತಿಸಿ ಮದ್ರಾಸ್ ಲೈಬ್ರರಿ ಅಸೋಸಿಯೇಷನ್, ಚೆನ್ನೈನ ಅಣ್ಣ ಸೆಂಟೇನರಿ ಗ್ರಂಥಾಲಯದಲ್ಲಿ ನಡೆದ ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ 133 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ 2025ರ ರಾಷ್ಟ್ರೀಯ ಅತ್ಯುತ್ತಮ ಗ್ರಂಥಪಾಲಕ ಪ್ರಶಸ್ತಿಯನ್ನು ನೀಡಲಾಯಿತು.

ಕಡಬ ಗ್ರಾಮದ ಎಡಮಂಗಲದವರಾಗಿರುವ ಇವರು ಪ್ರಸ್ತುತ ಬೆಂಗಳೂರಿನ ಜೈನ್ (ಡೀಮ್ಡ್ ಟು ಬಿ ಯೂನಿವರ್ಸಿಟಿ) ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.