














ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ.27 ರಂದು ಗಣೇಶ ಚತುರ್ಥಿ ಆಚರಿಸಲಾಯಿತು.
ಬೆಳಿಗ್ಗೆ ಗಣಹೋಮ,ಶ್ರೀ ದೇವರಿಗೆ ವಿಶೇಷ ಪೂಜೆ,ಮಹಾಪೂಜೆ ನಡೆಯಿತು.
ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಗ್ರಾಮಸ್ಥರಿಗೆ ವಿವಿಧ ಕ್ರೀಡಾಕೂಟಗಳು ನಡೆಯಿತು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಎಸ್.ಎನ್.ಮನ್ಮಥ ಮತ್ತು ಸದಸ್ಯರು ,ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್ ಬಾಂಜಿಕೋಡಿ ಹಾಗೂ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು.










