ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25 ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.















ಮಂಗಳೂರಿನಲ್ಲಿ ನಡೆದ ಎಸ್.
ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್ .ಸಿ.ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ. ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುನಂದ ಆಳ್ವರವರನ್ನು
ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಕರುಣಾಕರ ಆಳ್ವ,ಭಾಸ್ಕರ ನೆಟ್ಟಾರು,ವಾಸುದೇವ ನಾಯಕ್,ಜನಾರ್ಧನ ಗೌಡ ಆರ್ವಾರ,ಬೀಯಾಳು ಹಾಗೂ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ಉಪಸ್ಥಿತರಿದ್ದರು.










