ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25 ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.















ಮಂಗಳೂರಿನಲ್ಲಿ
ನಡೆದಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನಕರ ರವರನ್ನು
ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ
ನಿರ್ದೇಶಕರಾದ ಶ್ರೀಪತಿ ಭಟ್ ಮಜಿಗುಂಡಿ, ಸುಧಾಕರ ಆಲೆಟ್ಟಿ, ಕರುಣಾಕರ ಹಾಸ್ಪಾರೆ, ಗಂಗಾಧರ ಬಡ್ಡಡ್ಕ, ಧರ್ಮಪಾಲ ಕೊಯಿಂಗಾಜೆ, ಚಿದಾನಂದ ಕೋಲ್ಚಾರು, ಉಮೇಶ ಮಜಿಗುಂಡಿ, ವಿದ್ಯಾ ಕುಡೆಕಲ್ಲು, ಉಷಾ ಪಾಲಡ್ಕ ರವರು
ಉಪಸ್ಥಿತರಿದ್ದರು.










