ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ಗೆ ಭಾಜನವಾಗಿದೆ.















ಆ.30ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ ಪ್ರಶಸ್ತಿ ಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸ್ವೀಕರಿಸಿದರು.
ಉಪಾಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ನಿರ್ದೇಶಕರಾದ ವೆಂಕಟ್ ದಂಬೆಕೋಡಿ, ಪದ್ಮನಾಭ ಮೀನಾಜೆ, ಜನಾರ್ದನ ಅಚ್ರಪ್ಪಾಡಿ, ಕುಂಞ ಬಳ್ಳಕ್ಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು..










