







ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ 14 ರ ವಯೋಮಾನದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವು ಸೆ.1 ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 9.30 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ಬಳಿಕ ಖೋ ಖೋ ಪಂದ್ಯಾಟ ನಡೆಯಲಿದೆ.
ಸಂಜೆ ಗಂಟೆ 4.00 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದಲ್ಲಿ ಹಲವು ಜನ ಗಣ್ಯರು ಉಪಸ್ಥಿತರಿರುವರು ಎಂದು ಸಂಘಟಕರು ತಿಳಿಸಿದ್ದಾರೆ.










