ಸತತ ಹತ್ತನೇ ಬಾರಿಗೆ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

0

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯು ಆ.30 ರಂದು ಮಂಗಳೂರಿನಲ್ಲಿ ನಡೆಯಿತು. ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25 ಸಾಲಿನ ಸಂಘದ ಅಭಿವೃದ್ಧಿಯನ್ನು ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ರವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ ಲಕ್ಷ್ಮೀಶ ಕೆ ಎಸ್, ನಿರ್ದೇಶಕರಾದ ಪ್ರಶಾಂತ ಕಾಪಿಲ, ಪದ್ಮಯ ಅಡ್ಯಡ್ಕ, ಉದಯಕುಮಾರ್ ಉಳುವಾರು, ಶ್ರೀಲತಾ ದೇರಾಜೆ, ಲೋಚನ ಕೊಳಲು ಮೂಲೆ, ಆರಂತೋಡು ಹಾಲು ಉತ್ಪಾದಕಾರ ಸಹಕಾರ ಸಂಘದ ಅಧ್ಯಕ್ಷರಾದ ಮೋಹನ್ ಕಿನಾಲ, ಕಾರ್ಯದರ್ಶಿ ವಿಮಲಾ ಪೈಕ ಉಪಸ್ಥಿತರಿದ್ದರು.