














ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25 ರ ಸಾಲಿನ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಮಡಿಕೇರಿ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದು ,ಇಂದು ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ಕೊಡಗು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಕೇಟೋಳಿರ ಹರೀಶ್ ಪೂವಯ್ಯರವರು ಪಯಸ್ವಿನಿ ಪ್ರಾ ಕೃ ಪ ಸಹಕಾರ ಸಂಘದ ಅದ್ಯಕ್ಷರಾದ ಅನಂತ್ ಊರುಬೈಲು ಮತ್ತು ಕಾರ್ಯನಿರ್ವಹಣಾದಿಕಾರಿ ಬಿ.ಕೆ ಆನಂದರವರಿಗೆ ಪ್ರಶಸ್ತಿ ಪತ್ರ ಮತ್ತು ಗೌರವಧನ ನೀಡಿ ಗೌರವಿಸಿದರು.ಸಂಘದ ಅಧ್ಯಕ್ಷರಾದ ಅನಂತ್ ಊರುಬೈಲು ರವರು ಕಳೆದ ಐದು ವರ್ಷಗಳಿಂದ ನಿರಂತರವಾಗಿ ಅಪೆಕ್ಸ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಬ್ಯಾಂಕ್ ಪ್ರಶಸ್ತಿ ಪಡೆಯಲು ಕಾರಣಕರ್ತರಾದ ಸಂಘದ ಆಡಳಿತ ಮಂಡಳಿ ,ಸಿಬ್ಬಂದಿ ವರ್ಗ,ಸದಸ್ಯರು ಮತ್ತು ಗ್ರಾಹಕರಿಗೆ ಅಭಿನಂದನೆ ಸಲ್ಲಿಸಿದರು.










