ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರುಗಳು ಭಾಗಿ
ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಅಮೃತ ಮಹೋತ್ಸವದ ಅಂಗವಾಗಿ ಶಾಲಾ ಪರಿಸರದ ಸ್ವಚ್ಛತಾ ಅಭಿಯಾನದ 5 ನೇ ವಾರದ ಶ್ರಮದಾನ ಆ.31 ರಂದು ನಡೆಯಿತು.
















ಶಾಲಾ ಪರಿಸರ ಸ್ವಚ್ಛತೆ, ಕಾಡು ಬಳ್ಳಿಗಳ ತೆರವು ,ಹಾಗೂ ಐ ಟಿ ವಿಭಾಗದ ಕಾಲೇಜು ವಿದ್ಯಾರ್ಥಿಗಳಿಂದ ಹಳೆ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಣೆ ಮತ್ತು ದಾಖಲಿಕರಣ ಡಿಜಿಟಲ್ ಶ್ರಮದಾನ ಕಾರ್ಯಕ್ರಮ ನಡೆಯಿತು.ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರುಗಳು ಶ್ರಮದಾನದಲ್ಲಿ ಭಾಗವಹಿಸಿದ್ದರು.

ಈ ಸಂಧರ್ಭದಲ್ಲಿ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ,ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಮಂಜುಳಾ ಬಡಿಗೇರ್, ಉಪಾಧ್ಯಕ್ಷ ಹಸೈನಾರ್ ಜಯನಗರ,ಉಪನ್ಯಾಸಕರುಗಳಾದ ಶಿವರಾಮ ನಾಯ್ಕ, ಡಾ.ನವಿನ್,ದಿವಾಕರ್, ಮೇಘರಾಜ್ ಮೊದಲಾದವರು ಉಪಸ್ಥಿತರಿದ್ದರು.
ಶ್ರಮದಾನ ಕಾರ್ಯಕ್ರಮ ಪ್ರತಿ ಭಾನುವಾರ ನಡೆಯಲಿದ್ದು ಶ್ರಮದಾನದಲ್ಲಿ ಭಾಗವಹಿಸಲು ಇಚ್ಛೆಸುವ ಸಂಘ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಯ ಅಭಿಮಾನಿ ಗಳು ಮತ್ತು ಹಳೆ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸುವಂತೆ ಕೇಳಿಕ್ಕೊಂಡರು.










