ಕದಿರು ಕಟ್ಟುವುದು, ಭಕ್ತರಿಗೆ ತೆನೆ ವಿತರಣೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯವು ವಿವಿಧ ವೈಧಿಕ ವಿದಿವಿಧಾನಗಳೊಂದಿಗೆ ಆ.1 ನೆರವೇರಿತು.
ಈ ನಿಮಿತ್ತ ಪ್ರಾತಃಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಮೂಲ ವಿಗ್ರಹಕ್ಕೆ ಪಂಚಾಮೃಮಹಾಭಿಷೇಕವನ್ನು ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ನೆರವೇರಿಸಿದರು.















ಅಭಿಷೇಕದ ಬಳಿಕ ತೆನೆ ತರಲು ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ದರ್ಪಣತೀರ್ಥ ನದಿ ತೀರಕ್ಕೆ ತೆರಳಿದರು. ಬತ್ತದ ತೆನೆಗೆ ದರ್ಪಣತೀರ್ಥ ನದಿಯ ತಟದಲ್ಲಿ ವಿವಿಧ ವೈದಿಕ ವಿದಿ ವಿಧಾನಗಳ ಮೂಲಕ ಪ್ರಧಾನ ಅರ್ಚಕರು ಪೂಜೆ ನೆರವೇರಿಸಿದರು. ಕ್ಷೇತ್ರ ಪುರೋಹಿತ ವೇದಮೂರ್ತಿ ಮದುಸೂಧನ ಕಲ್ಲೂರಾಯರು ನವಗ್ರಹ ಧಾನ ನೆರವೇರಿಸಿದರು. ಬಳಿಕ ಬತ್ತದ ತೆನೆಯನ್ನು ದೀವಟಿಗೆ, ಬ್ಯಾಂಡ್, ವಾದ್ಯದ ನಿನಾದದೊಂದಿಗೆ, ಆನೆ, ಬಿರುದಾವಳಿಗಳ ಮೂಲಕ ಮಂತ್ರಘೋಷದೊಂದಿಗೆ ಮೆರವಣಿಗೆಯಲ್ಲಿ ದೇವಳಕ್ಕೆ ತರಲಾಯಿತು. ಶ್ರೀ ದೇವಳಕ್ಕೆ ಒಂದು ಪ್ರದಕ್ಷಿಣೆ ಬಂದು ಅರ್ಚಕರು ತೆನೆಯನ್ನು ಗರ್ಭಗುಡಿಗೆ ಕೊಂಡೊಯ್ದರು. ನಂತರ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರು ಕದಿರು ಪೂಜೆ ನೆರವೇರಿಸಿದರು.ಬಳಿಕ ಶ್ರೀ ದೇವಳದ ಗರ್ಭಗುಡಿಗೆ ಕದಿರು ಕಟ್ಟಿದರು.
ಶ್ರೀ ದೇವಳದ ಗರ್ಭಗುಡಿಗೆ ಕೊರಳನ್ನು ಕಟ್ಟಿದ ಬಳಿಕ ಶ್ರೀ ದೇವಳದ ಪರಿವಾರ ಗುಡಿಗಳಿಗೆ, ದೇವಳದ ವಿವಿಧ ಭಾಗಗಳಿಗೆ ಕಟ್ಟಲು, ರಥಗಳಿಗೆ ಕಟ್ಟಲು ಗುರಿಕಾರರಿಗೆ , ಕಛೇರಿಗೆ ಕದಿರನ್ನು ಕಟ್ಟಲು ಮತ್ತು ದೇವಳದ ಆಡಳಿತ ವರ್ಗಗಳಿಗೆ ತೆನೆ ವಿತರಿಸಲಾಯಿತು. ತದನಂತರ ಅಲ್ಲಿ ಸೇರಿದ್ದ ಸಹಸ್ರಾರು ಭಕ್ತಾಧಿಗಳಿಗೆ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಕದಿರನ್ನು ವಿತರಿಸಿದರು. ನೂರಾರು ಭಕ್ತರು ಕದಿರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಯೇಸುರಾಜ್,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, , ಅಜಿತ್ ಕುಮಾರ್,ಲೀಲಾ ಮನಮೋಹನ್, ಸೌಮ್ಯಾ ಭರತ್, ಪ್ರವೀಣ ರೈ ಮರುವಂಜ,
ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ,
ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಅಚ್ಚುತ್ತ ಗೌಡ ಬಳ್ಪ, ಬ್ರಹ್ಮರಥ ದಾನಿ ಅಜಿತ್ ಶೆಟ್ಟಿ ಕಡಬ, ಕಚೇರಿ ಅಧೀಕ್ಷಕ ಕೆ.ಎಂ.ಗೋಪಿನಾಥ್ ನಂಬೀಶ, ಶಿಷ್ಠಚಾರಾಧಿಕಾರಿ ಜಯರಾಮ ರಾವ್, ಹೆಬ್ಬಾರ್ ಪ್ರಸನ್ನ ಭಟ್ ಹಿರ್ತರಾ, ದೇವಳದ ಪಾಟಾಳಿ ಲೋಕೇಶ್ ಎ.ಆರ್ ಸೇರಿದಂತೆ ದೇವಳದ ಸಿಬ್ಬಂದಿಗಳು, ಭಕ್ತರು ಉಪಸ್ಥಿತರಿದ್ದರು.










