ಕೆವಿಜಿ ಕಾನೂನು ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ

0

2025- 26ನೇ ಸಾಲಿನ 3ನೇ ವರ್ಷದ ಪ್ರಥಮ ಎಲ್.ಎಲ್.ಬಿ ವಿದ್ಯಾರ್ಥಿಗಳಿಗೆ ತರಗತಿ ಪ್ರಾರಂಭೋತ್ಸವ ಆ. 1 ರoದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ವಹಿಸಿ ಮಾತನಾಡಿ ‘ಪ್ರಸ್ತುತ ಸಮಾಜದ ಬದಲಾವಣೆ ಗಳಿಗೆ ವಿದ್ಯಾರ್ಥಿಗಳು ಹೊಂದಿಕೊಂಡು ಕಾನೂನಿನ ವಿದ್ಯಾಭ್ಯಾಸದ ರೂಪರೇಷೆಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಸುಳ್ಯ ನಿರ್ದೇಶಕ ಜಗದೀಶ್ ಅಡ್ತಲೆ ಮಾತನಾಡಿ ಸಮಾಜದಲ್ಲಿ ಪ್ರತಿಯೊಬ್ಬರು ಕಾನೂನನ್ನು ಅರಿತು, ಹಕ್ಕು ಮತ್ತು ಬಾಧ್ಯತೆಗಳ ಅರಿವಿನೊಂದಿಗೆ ಜೀವಿಸಲು ಕರೆ ನೀಡಿದರು. ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ ದಾಮೋದರ ಗೌಡರು ಪ್ರಸ್ತುತ ಕಾಲಘಟ್ಟ ದಲ್ಲಿ ಕಾನೂನಿನ ಮಹತ್ವವನ್ನು ವಿವರಿಸಿದರು. ಕಾಲೇಜಿನ ಪ್ರಾoಶುಪಾಲೆ ಶ್ರೀಮತಿ ಟೀನಾ ಎಚ್‌.ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವಿದ್ಯಾರ್ಥಿನಿಯರಾದ ಕು. ರಮ್ಯಾ ಮತ್ತು ಕು. ಚಂದನ ಪ್ರಾರ್ಥಿಸಿದರು. ಉಪನ್ಯಾಸಕಿ ಶ್ರೀಮತಿ ಶರ್ಮಿಳಾ ಬಿ ರೈ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ವಿಜಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿಗಳು ಮತ್ತು ಹೆತ್ತವರು ಉಪಸ್ಥಿತರಿದ್ದರು.