ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.








ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕಲ್ಕುದಿಯವರಿಗೆ ಪ್ರಶಸ್ತಿ ಹಸ್ತಾಂತರಿಸಿದರು.
ಸಂಘದ ಉಪಾಧ್ಯಕ್ಷ ಗಿರೀಶ್ ಪದ್ನಡ್ಕ, ನಿರ್ದೇಶಕರಾದ ಭರತ್ ನೆಕ್ರಾಜೆ ಮತ್ತು ಶಿವಪ್ರಸಾದ್ ಮಾದನಮನೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.










