ಉಬರಡ್ಕ ಮಿತ್ತೂರು ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ನಿಂದ ಶೇ.100 ಸಾಲ ವಸೂಲಾತಿ ಸಾಧನೆಗೆ ಪ್ರಶಸ್ತಿ

0

ಉಬರಡ್ಕ‌ಮಿತ್ತೂರು ಪ್ರಾ.ಕೃ.ಪ.ಸ.ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಶೇ.100 ಸಾಲ ವಸೂಲಾತಿ ಸಾಧನೆಗೆ ಪ್ರಶಸ್ತಿ ಲಭಿಸಿದೆ.

ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಉಬರಡ್ಕ‌ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ದಾಮೋದರ ಗೌಡ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆಯವರಿಗೆ ಪ್ರಶಸ್ತಿ ಹಸ್ತಾಂತರಿಸಿದರು.
ಸಂಘದ ಉಪಾಧ್ಯಕ್ಷ ರಾಜೇಶ್ ನೆಕ್ಕಿಲ, ನಿರ್ದೇಶಕರಾದ ಪಿ.ಎಸ್. ಗಂಗಾಧರ, ಹರಿಪ್ರಸಾದ್ ಪಾನತ್ತಿಲ, ಸುರೇಶ್ ಎಂ.ಎಚ್., ಈಶ್ವರ ಆರ್. ಕಲ್ಚಾರು, ಶ್ರೀಮತಿ ಶಾರದಾ ಡಿ.ಶೆಟ್ಟಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಶಿವಪ್ರಸಾದ್ ಪಡ್ಪು, ಸಿಬ್ಬಂದಿ ಗುರುವ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.