ಪೈಚಾರ್ ನಿವಾಸಿ, ಆರ್ತಾಜೆ ಉಮೇಶ್ ಗೌಡರು ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿರುವಾಗ ಮರದಿಂದ ಬಿದ್ದು ಜಖಂಗೊಂಡು ಮೃತಪಟ್ಟ ಘಟನೆ ಇಂದು ಸಂಜೆ ವರದಿಯಾಗಿದೆ. ಅವರುಗೆ ಸುಮಾರು 50 ವರ್ಷ ವಯಸ್ಸಾಗಿತ್ತು.









ಮರದಿಂದ ಬಿದ್ದು ಗಂಭೀರ ಗಾಯಗೊಂಡ ಉಮೇಶ್ ರವರನ್ನು ಚಿಕಿತ್ಸೆಗೆಂದು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.
ಮೃತರು ಪತ್ನಿ ವೇದಾವತಿ, ಪುತ್ರಿ ಸುದ್ದಿ ಚಾನೆಲ್ ನಿರೂಪಕಿ ಶ್ರೀಮತಿ ಪೂಜಾಶ್ರೀ ವಿತೇಶ್ ಕೋಡಿ, ಅಳಿಯ ವಿತೇಶ್ ಕೋಡಿ, ಮೊಮ್ಮಗ ಸೇರಿದಂತೆ ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.










