ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ವಿವೇಚನಾ ರಜೆ ಘೋಷಣೆ ಮಾಡಲಾಗಿದೆ.









ತಾಲ್ಲೂಕಿನ ಕೆಳವು ಕಡೆ ನಿರಂತರ ಮಳೆ ಸುರಿಯುತ್ತಿದ್ದು ಅಲ್ಲಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಅಲ್ಲಿಯ ಮುಖ್ಯ ಶಿಕ್ಷರು ಅಥವಾ ಪ್ರಾಂಶುಪಾಲರು ರಜೆ ಘೋಷಿಸಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಇದರನ್ವಯ ಈಗಾಗಲೇ ತಾಲೂಕಿನ ಹಲವು ಶಾಲೆಗಳು ರಜೆ ಘೋಷಣೆ ಮಾಡಿದೆ.










