ನಾಲ್ಕೂರು : ವಿಜಯ ಗ್ರಾಮ ಸಮಿತಿ ಸದಸ್ಯರಿಂದ ಪಶು ವೈದ್ಯಕೀಯ ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯ ಭೇಟಿ

0

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವಿಜಯ ಗ್ರಾಮ ಸಮಿತಿ ನಾಲ್ಕೂರು ಇಲ್ಲಿನ ಸದಸ್ಯರು ಮಂಗಳೂರಿನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇಲ್ಲಿಗೆ ಭೇಟಿ ನೀಡಿ ಸುಸ್ಥಿರ ಆದಾಯಕ್ಕಾಗಿ ಸಮಗ್ರ ಕೃಷಿ ಪದ್ಧತಿಗಳ ಕುರಿತು ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ಸುಮಾರು 24 ಮಂದಿ ಮಹಿಳೆಯರು ಹಾಗೂ ಪುರುಷರು ತರಬೇತಿಯನ್ನು ಪಡೆದುಕೊಂಡರು. ವರದಿ : ಡಿಹೆಚ್