ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ನೆಲ್ಲೂರು ಕೆಮ್ರಾಜೆ ಮತ್ತು ಮರ್ಕಂಜ ಇದರ ವತಿಯಿಂದ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸುದ್ದಿ ಸುಳ್ಯ ಹಬ್ಬ ಗ್ರಾಮ ಸಮಿತಿ ನೆಲ್ಲೂರು ಕೆಮ್ರಾಜೆ, ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ನೆಲ್ಲೂರು ಕೆಮ್ರಾಜೆ
ಮತ್ತು ಕೆ. ವಿ. ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ
ಜಂಟಿ ಆಶ್ರಯದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಸೆ.4ರಂದು ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 9.30 ಗಂಟೆಗೆ ಉದ್ಘಾಟನೆ ನಡೆಯಲಿದ್ದು, ವಿಜಯ ಗ್ರಾಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಉದ್ಘಾಟಿಸಲಿದ್ದಾರೆ. ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಅಧ್ಯಕ್ಷತೆ ವಹಿಸಲಿದ್ದಾರೆ.















ಮುಖ್ಯ ಅತಿಥಿಗಳಾಗಿ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ ಕೋಟೆಮಲೆ, ಸುದ್ದಿ ಬಿಡುಗಡೆ ವಾರ ಪತ್ರಿಕೆಯ ಪ್ರಧಾನ ಸಂಪಾದಕ ಹರೀಶ್ ಬಂಟ್ವಾಳ್ ಆಗಮಿಸಲಿದ್ದಾರೆ. ನೆಲ್ಲೂರು ಕೆಮ್ರಾಜೆ ಮತ್ತು ಮರ್ಕಂಜ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ದಯಾನಂದ ಕೊರತ್ತೋಡಿ, ಚಾಮುಂಡೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಜಯಂತ, ದೊಡ್ಡತೋಟ ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕ ಅನಂತ ಶಿವಪ್ರಸಾದ್, ಕೆ ವಿ ಜಿ ದಂತ ಮಹಾವಿದ್ಯಾಲಯದ ಸಾರ್ವಜನಿಕ ದಂತ ಅರೋಗ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ರಾದ ಡಾ. ಸುಮನ್ ಬಿ. ಗೌರವ ಉಪಸ್ಥಿತರಿರಳಿದ್ದಾರೆ.
ಶಿಬಿರ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯಲಿದೆ.
ಶಿಬಿರದಲ್ಲಿ ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಚತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ ಇತ್ಯಾದಿ ಚಿಕಿತ್ಸೆಗಳು ಲಭ್ಯವಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.










