














ಪಯಸ್ವಿನಿ ಸ್ತ್ರೀಶಕ್ತಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.04 ರಂದು ಬೆಳಿಗ್ಗೆ ಗಂಟೆ 10.00 ಕ್ಕೆ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮರವರ ಅಧ್ಯಕ್ಷತೆಯಲ್ಲಿ ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಕೆವಿಜಿ ಪುರಭವನದಲ್ಲಿ ನಡೆಯಲಿದ್ದ ಮಹಾಸಭೆಯು ಅನಿವಾರ್ಯ ಕಾರಣಗಳಿಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದ್ದು ಸಂಘದ ಸರ್ವ ಸದಸ್ಯರು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭಾ ಕಲಾಪಗಳನ್ನು ನಡೆಸಿಕೊಡಬೇಕೆಂದು ಸಂಘದ ಅಧ್ಯಕ್ಷರು ಹಾಗೂ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ತಿಳಿಸಿರುತ್ತಾರೆ.










