ಅಡ್ಕಾರು ಬಳಿ ಬಸ್ ಗಳು ಪರಸ್ಪರ ಡಿಕ್ಕಿ – ಪ್ರಯಾಣಿಕರಿಗೆ ಗಾಯ

0

ಅಡ್ಕಾರು ಬಳಿ ಎರಡು ಸರಕಾರಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ.

ಪುತ್ತುರಿಂದ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್ ಹಾಗೂ ಸುಳ್ಯದಿಂದ ಪುತ್ತುರಿಗೆ ಹೋಗುತ್ತಿದ್ದ ಸರಕಾರಿ ಬಸ್ ಅಡ್ಕಾರು ಬಸ್ ನಿಲ್ದಾಣ ಬಳಿ ಡಿಕ್ಕಿ ಹೊಡೆಯಿತು.

ಅಪಘಾತ ಸಂಭವಿಸಿ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಬೇರೆ ಬೇರೆ ವಾಹನಗಳಲ್ಲಿ ಸುಳ್ಯ ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.