ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ

0

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಪ್ರಥಮ, ಐವರ್ನಾಡು ಹಾಗೂ ಮೋರಾರ್ಜಿ ಪಂಜ ದ್ವಿತೀಯ

ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು.

ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಶಿಕ್ಷಕ ಪ್ರವೀಣ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು. ವೇದಿಕೆಯಲ್ಲಿ ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕರು ಸೂಫಿ ಪೆರಾಜೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ, ಎ ಗ್ರೇಡ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಪದ್ಮನಾಭ, ಶಿಕ್ಷಣ ಇಲಾಖೆಯ ನಾರಾಯಣ, ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಶಿವರಾಮ ಏನೆಕಲ್, ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಯೋಗನಾಥ ನಿರೂಪಿಸಿ ವಂದಿಸಿದರು.

ಸಮಾರೋಪ ಸಮಾರಂಭ
ವಿಜೇತ ತಂಡಗಳಿಗೆ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಬಹುಮಾನ ವಿತರಿಸಿದರು, ಸಮಾರಂಭದ ವೇದಿಕೆಯಲ್ಲಿ ಸೂಫಿ ಪೆರಾಜೆ. ಶಿಕ್ಷಕ ದಿನಕರ್ ನಿರೂಪಿಸಿ ವಂದಿಸಿದರು.

ಫಲಿತಾಂಶ
ಬಾಲಕರ ವಿಭಾಗದಲ್ಲಿ
ಪ್ರಥಮ ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ ಪಡೆದರೆ,
ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಐವನಾಡು ಪಡೆಯಿತು.
ಬಾಲಕಿಯರ ವಿಭಾಗದಲ್ಲಿ
ಪ್ರಥಮ ಸ್ಥಾನವನ್ನು ವಿದ್ಯಾಬೋಧಿನಿ ಬಾಳಿಲ ಹಾಗೂ
ದ್ವಿತೀಯ ಸ್ಥಾನವನ್ನು ಮೊರಾರ್ಜಿ ಪ್ರೌಢಶಾಲೆ ಪಂಜ ಪಡೆಯಿತು.