














ದಕ್ಷಿಣ ಕನ್ನಡ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ, ಇದರ ಸಹ ಯೊಂದಿಗೆ ನಡೆದ 14 ರಿಂದ 17 ರ ವಯೋಮಾನದ ಬಾಲಕಿ -ಬಾಲಕರ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ 03 ಸೆಪ್ಟೆಂಬರ್ 2025 ಬುಧವಾರ ದಂದು ಆಯೋಜಿಸಲಾಗಿತ್ತು. 14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಮಣಿಪ್ರಕಾಶ್. ಕಡೋಡಿ ರವರು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಶ್ರೀ ನಾರಾಯಣ ಗುರು ವಸತಿ ಶಾಲೆ ಪುಂಜಾಲಕಟ್ಟೆ ಇಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಚಂದ್ರಶೇಖರ ಕಡೋಡಿ ಮತ್ತು ಭಾರತಿ ದಂಪತಿಗಳ ಪುತ್ರ.
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಅವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ.ಇವರು ಸುಳ್ಯ ತಾಲೂಕಿನ ಸ. ಕಿ. ಪ್ರಾ. ವಾಲ್ತಾಜೆ. ಪಿ. ಯಂ ಶ್ರೀ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿಯ ಹಳೆವಿದ್ಯಾರ್ಥಿಯಾಗಿದ್ದಾರೆ. ಈ ಬಾರಿ ಯೋಗ ವಿಭಾಗದಲ್ಲಿ ತಾಲೂಕಿನಿಂದ ಪ್ರಥಮ ಸ್ಥಾನ ಪಡೆದವರು ಮಾತ್ರ ಆಯ್ಕೆ ಆಗುವ ಅವಕಾಶ ಇದ್ದು ತೀವ್ರ ಪ್ರತಿಸ್ಪರ್ಧೆ ಮೂಲಕ ಇವರ ಆಯ್ಕೆ ಬಂಟ್ವಾಳ ತಾಲೂಕಿನಲ್ಲಿ ಗಮನ ಸೆಳೆದಿದ್ದು ಮಾಜಿ ಜಿಲ್ಲಾಪಂಚಾಯತ್ ಉಪಾಧ್ಯಕ್ಷ ತುಂಗಪ್ಪ ಬಂಗೇರರವರು ಗೌರವಿಸಿದ್ದರು ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾಂಶುಪಾಲರಾದ ಸಂತೋಷ್, ದೈಹಿಕ ಶಿಕ್ಷಕರು, ಗುರುಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು










