ಪಂಜ: ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಅ.1: ವಿಜೃಂಭಣೆಯ ಶ್ರೀ ಶಾರದೋತ್ಸವ

0

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಶಾರದೋತ್ಸವ ಸಮಿತಿ -2025 ಇದರ ವತಿಯಿಂದ ಪಂಜ ಪರಿಸರದ ನಾಡ ಹಬ್ಬ 16ನೇ ವರುಷದ ಶಾರದೋತ್ಸವ ಅ.1 ರಂದು ವಿಜೃಂಭಣೆಯಿಂದ ಜರುಗಲಿದೆ.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.4. ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು.

ಶಾರದೋತ್ಸವ ಸಮಿತಿ ಪೂರ್ವಾಧ್ಯಕ್ಷ ಕೆ.ಕೃಷ್ಣ ವೈಲಾಯ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.
ಶಾರದೋತ್ಸವ ಸಮಿತಿ ಅಧ್ಯಕ್ಷ ದಾಮೋದರ ಪಲ್ಲೋಡಿ ಸಭಾಧ್ಯಕ್ಷತೆ ವಹಿಸಿದ್ದರು.


ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಪೂರ್ವಾಧ್ಯಕ್ಷ ಮೇದಪ್ಪ ಗೌಡ ಪಂಜದಬೈಲು, ಕಾರ್ಯದರ್ಶಿ ಗುರುಪ್ರಸಾದ್ ತೋಟ, ಶಾರದೋತ್ಸವ ಸಮಿತಿಯ ಕಾರ್ಯದರ್ಶಿ ರಾಜ ಕುಮಾರ್ ಬೇರ್ಯ, ಕೋಶಾಧಿಕಾರಿ ಜೀನತ್ ಚೀಮುಳ್ಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಂಜ ವಲಯ ಮೇಲ್ವಿಚಾರಕಿ ಶ್ರೀಮತಿ ರೋಹಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ರಾಜ ಕುಮಾರ್ ಬೇರ್ಯ ಸ್ವಾಗತಿಸಿದರು. ಗುರು ಪ್ರಸಾದ್ ತೋಟ ನಿರೂಪಿಸಿದರು.ವಿವಿಧ ಸಂಚಾಲಕರು, ಸದಸ್ಯರು ಪಾಲ್ಗೊಂಡಿದ್ದರು.