ಎಣ್ಮೂರು ಸ.ಹಿ.ಪ್ರಾ.ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು, ,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು ಇದರ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ ಸೆ. ೨ರಂದು ನಡೆಯಿತು.
















ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಅಬ್ದುಲ್ ಶರೀಫ್, ಸುಳ್ಯ ತಾಲೂಕು ಕೃಷಿ ಅಧಿಕಾರಿಯಾದ ರಮೇಶ್, ಯೋಜನೆಯ ನಿಂತಿಕಲ್ಲು ಸೇವಾಪ್ರತಿನಿಧಿಯಾದ ಶ್ರೀಮತಿ ಲೀಲಾವತಿ , ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಶ್ರೀಮತಿ ವನಿತಾ ರೈ, ಮುಖ್ಯ ಶಿಕ್ಷಕರಾದ ಶ್ರೀಮತಿ ಭುವನೇಶ್ವರಿ ಮತ್ತು ಪೋಷಕರು , ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೃಷಿ ಅಧಿಕಾರಿಗಳಾದ ರಮೇಶ್ರವರು ಮಾತನಾಡಿ, ಮಾನವನ ಸ್ವಾರ್ಥಕ್ಕೆ ಪರಿಸರ ನಾಶ ಆಗಿದೆ. ಗಿಡ ಮರಗಳನ್ನು ಬೆಳೆಸುವುದು ನಮ್ಮ ಕರ್ತವ್ಯ , ಎಂಬ ಪರಿಸರ ಜಾಗೃತಿ ಮೂಡಿಸಿದರು.

ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ನಂತರ ಎಲ್ಲ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡಗಳನ್ನು ವಿತರಿಸಿ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.
ಮನೆಯಲ್ಲಿ ಗಿಡ ನೆಟ್ಟು ಬೆಳೆಸುವಂತೆ ಪ್ರೋತ್ಸಾಹಿಸಲಾಯಿತು.
ಮುಖ್ಯಶಿಕ್ಷಕಿ ಶ್ರೀಮತಿ ಭುವನೇಶ್ವರಿ ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಶಾಂತಮ್ಮ ವಂದಿಸಿದರು.










