














ಪಂಜ ಸಮೀಪದ ಕರಿಕ್ಕಳದಲ್ಲಿ ಖಾಸಗಿ ಬಸ್ ಮತ್ತು ಬೈಕ್ ಅಪಘಾತ ಸಂಭವಿಸಿದ್ದು ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಸೆ.5 ರಂದು ವರದಿಯಾಗಿದೆ. ಸುಬ್ರಹ್ಮಣ್ಯ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಪುತ್ತೂರು ಕಡೆ ಹೋಗುತ್ತಿದ್ದ ಬೈಕ್ ಕರಿಕ್ಕಳದ ತಿರುವಿನಲ್ಲಿ ಅಪಘಾದ ಸಂಭವಿಸಿದೆ. ಬೈಕ್ ಸವಾರರಿಬ್ಬರು ಗಾಯಗೊಂಡಿದ್ದು ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ಹೋಗಿರುವುದಾಗಿ ತಿಳಿದು ಬಂದಿದೆ. ಬೈಕ್ ಜಖಂ ಗೊಂಡಿದೆ.










