
ಭಾರತ್ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ ಹಾಗೂ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಸಮಾರೋಪ ಕಾರ್ಯಕ್ರಮವು ಸೆ.02 ರಂದು ಹಮ್ಮಿಕೊಳ್ಳಲಾಯಿತು. .ಇದರ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಭಾರತ ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆ ಸುಳ್ಯ
ಅಧ್ಯಕ್ಷರಾದ ಶಶಿಧರ್ ಎಂ. ಜೆ ವಹಿಸಿದ್ದರು.,
















ಶ್ರೀಮತಿ ಪ್ರೇಮಲತಾ ಕಾರ್ಯದರ್ಶಿಗಳು ಸ್ಥಳೀಯ ಸಂಸ್ಥೆ ಸುಳ್ಯ,ಸ್ಪರ್ಧಾ ನಿರ್ಣಾಯಕರುಗಳಾದ ಶ್ರೀಮತಿ ಸತ್ಯಭಾಮ ಹಾಗೂ ಕು.ಶುಭದಾ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ನಂತರ ಸುಳ್ಯ ವಲಯ ಮಟ್ಟದ ಸ್ಫರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಸ್ಕೌಟ್ ವಿಭಾಗದಲ್ಲಿ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಸುಳ್ಯ , ಗೈಡ್ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ, ಕಬ್ ವಿಭಾಗದಲ್ಲಿ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬುಲ್ ಬಲ್ ವಿಭಾಗದಲ್ಲಿ ರೋಟರಿ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆ ಸುಳ್ಯ ತಂಡಗಳು ಪ್ರಥಮ ಬಹುಮಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಶ್ರೀಮತಿ ಪ್ರೇಮಲತಾ ರವರು ಸ್ವಾಗತಿಸಿ, ಭಾನುಪ್ರಕಾಶ್ ರವರು ಕಾರ್ಯಕ್ರಮ ನಿರೂಪಿಸಿದರು.










