ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೇವಚಳ್ಳ ಸರಕಾರಿ ಶಾಲಾ ಮುಖ್ಯೋಪಾಧ್ಯಾಯ ಶ್ರೀಧರ ಗೌಡ ಕೆರೆಮೂಲೆಯವರಿಗೆ ಅದ್ದೂರಿ ಸ್ವಾಗತ

0

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೇವಚಳ್ಳ ಸರಕಾರಿ ಶಾಲಾ ಮುಖ್ಯೋಪಾಧ್ಯಾಯ ಶ್ರೀಧರ ಗೌಡ ಕೆರೆಮೂಲೆಯವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ದೇವಚಳ್ಳ ಶಾಲಾ ವಿದ್ಯಾರ್ಥಿಗಳು, ಸ್ಕೌಟ್ಸ್ ಗೈಡ್ಸ್‌ನ ವಿದ್ಯಾರ್ಥಿಗಳು ಬ್ಯಾಂಡ್ ಸೆಟ್ ಮೂಲಕ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ನೆಲ್ಲೂರು ಕೆಮ್ರಾಜೆ ಪ್ರಾ. ಕೃ. ಪ. ಸ. ಸಂಘದ ಬಳಿಯಿಂದ ಅದ್ದೂರಿ ಮೆರವಣಿಗೆಯ ಮೂಲಕ ಕರೆತರಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ, ದೇವಚಳ್ಳ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ. ವಿ. ತೀರ್ಥರಾಮ, ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಎಲಿಮಲೆ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ, ಎಲಿಮಲೆ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು, ದೇವಚಳ್ಳ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಬಿ. ವಿ., ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಂದನಾ ಹೊಸ್ತೋಟ, ಸದಸ್ಯ ವೇಣುಗೋಪಾಲ ಪುನುಕುಟ್ಟಿ,ದೇವಚಳ್ಳ ಎಸ್ ಡಿ ಎಂ ಸಿ ಅಧ್ಯಕ್ಷ ಜಯಾನಂದ ಪಟ್ಟೆ, ಸರಕಾರಿ ಪ್ರೌಢಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ, ಜ್ಞಾನದೀಪ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯರಾದ ಗದಾಧರ ಬಾಳುಗೋಡು ಸೇರಿದಂತೆ ಪೋಷಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿಯವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.