ಶಾರದೋತ್ಸವ ಸಮಿತಿ ಬೆಳ್ಳಾರೆ ವತಿಯಿಂದ ಅ.02 ರಂದು ನಡೆಯುವ 38 ನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಉದಯ ಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು.









ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು,ಶಾರದೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಉಮಿಕ್ಕಳ, ಮಂಜುನಾಥ ಹೆಗಡೆ, ಶಿವಮಣಿಯಾಣಿ, ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ಮಾಧವ ತಡಕಜೆ, ನವೀನ, ಪ್ರೇಮಚಂದ್ರ ಬೆಳ್ಳಾರೆ, ಉದಯ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.











