ಸೆ. 16: ಬೆಳ್ಳಾರೆಯ ಪನ್ನೆಯಲ್ಲಿ ಸುಳ್ಯ ತಾಲೂಕು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ವಿಶ್ವಕರ್ಮ ಪೂಜೆ, ಧಾರ್ಮಿಕ ಸಭೆ

0

ಸುಳ್ಯ ತಾಲೂಕು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಬೆಳ್ಳಾರೆ ಪನ್ನೆ ಇದರ ಆಶ್ರಯದಲ್ಲಿ 35ನೇ ವರ್ಷದ ಕನ್ಯಾ ಸಂಕ್ರಮಣದ ಶ್ರೀ ವಿಶ್ವಕರ್ಮ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಸೆ. 16ರಂದು
ಬೆಳ್ಳಾರೆಯ ಪನ್ನೆಯಲ್ಲಿರುವ ಶ್ರೀ ಗಾಯತ್ರಿ ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 8.00 ಗಂಟೆಗೆ ಧ್ವಜಾರೋಹಣ, 9.30ರಿಂದ ವಿಶ್ವಕರ್ಮ ಪೂಜೆ ನಡೆಯಲಿದೆ. ಮಧ್ಯಾಹ್ನ 11.30ರಿಂದ ಸಂಘದ ಅಧ್ಯಕ್ಷ ಸಿ.ಹೆಚ್. ಸೋಮಶೇಖರ ಆಚಾರ್ಯರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ವಾಸ್ತುಶಿಲ್ಪಿ ಪದ್ಮನಾಭ ಆಚಾರ್ಯ ಕಡೆಪಾಲ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ವಿ.‌ಆಚಾರ್ಯ ಕಲ್ಮಡ್ಕ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ನಾರಾಯಣ ಪುರೋಹಿತ್ ನೂಜಾಡಿ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ ಜರಗಲಿರುವುದು. ವಿಶ್ವಕರ್ಮ ಪೂಜೆ ಮಾಡಿಸುವವರು ರೂ. 200/- ಪಾವತಿಸುವುದು.


2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸುಳ್ಯ ತಾಲೂಕು ವಿಶ್ವಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯನ್ನು ತಾ. 11.09.2025ರ ಒಳಗೆ ಸಿ.ಹೆಚ್ ಸೋಮಶೇಖರ ಆಚಾರ್ಯ ಅಧ್ಯಕ್ಷರು, ಸುಳ್ಯ ತಾಲೂಕು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಬೆಳ್ಳಾರೆ ಇವರ ವಿಳಾಸಕ್ಕೆ ಕಳುಹಿಸಿಕೊಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.