ಎಡಮಂಗಲ: ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

0

ಎಡಮಂಗಲ ಸರಕಾರಿ ಪ್ರೌಢಶಾಲೆಯಲ್ಲಿ 17 ವಯೋಮಾನದ ಬಾಲಕ ಮತ್ತು ಬಾಲಕಿಯರ ಪಂದ್ಯಾಟವು ಸೆ. 8 ರಂದು ಶಾಸಕಿ ಕುಮಾರಿ ಭಾಗಿರಥಿ ಮುರುಳ್ಯ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಎಡಮಂಗಲ ಪಂಚಾಯತ್ ಅಧ್ಯಕ್ಷ ರಾಮಣ್ಣ ಜಾಲತಾರ್, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಹರಿ ನುಚಿಲ, ಸಂಪನ್ಮೂಲ ವ್ಯಕ್ತಿ ಜಯಂತ ಕೆ, ಎಸ್ ಡಿ ಎಂ ಸಿ ಅಧ್ಯಕ್ಷ ಧನಂಜಯ್ ಪರ್ಲ, ಶಾಲಾ ದಾನಿಗಳಾದ ಪ್ರಕಾಶ್ ಭಟ್, ಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ಖಾದರ್,

ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕ ಸಂಘ ಸುಳ್ಯ ಇದರ ಅಧ್ಯಕ್ಷ ಧನಂಜಯ್, ಸುಳ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮನಾಭ, ಡಿಕೆ ನ್ಯೂ ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ನ ವಸಂತ ಡೇಮಾಯಿಲ , ಉಪಸ್ಥಿತರಿದ್ದರು, ಮುಖ್ಯ ಶಿಕ್ಷಕ ಅಬ್ದುಲ್ ಖಾದರ್ ಪ್ರಸ್ತಾವನೆಗೈದರು , ಶಿಕ್ಷಕ ಸಂತೋಷ್ ಸ್ವಾಗತಿಸಿದರು, ಶಿಕ್ಷಕ ಆನಂದ ರವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
-ಎ.ಸಂಕಪ್ಪ ಸಾಲ್ಯಾನ್