ಪುಂಚತ್ತಾರಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪೆರ್ಲಂಪಾಡಿಯ ಯುವಕನಿಗೆ ನ್ಯಾಯಾಂಗ ಬಂಧನ

0

ಕಾಣಿಯೂರು ಸಮೀಪದ ಪುಂಚತ್ತಾರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪೆರ್ಲಂಪಾಡಿಯ ಯುವಕನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ತಿಳಿದು ಬಂದಿದೆ.
ಕಾಲೇಜು ವಿದ್ಯಾರ್ಥಿನಿ ಸಂಜೆ ರಸ್ತೆ ಬದಿ ನಡೆದುಕೊಂಡು ಮನೆಗೆ ಹೋಗುವಾಗ ಪೆರ್ಲಂಪಾಡಿಯ ಉದಯ ಎಂಬವನು ಬೈಕಿನಲ್ಲಿ ಬಂದು ವಿದ್ಯಾರ್ಥಿನಿಯ ಮೈಗೆ ಕೈ ಹಾಕಿರುವುದಾಗಿ ವಿದ್ಯಾರ್ಥಿನಿ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ
ಸಿ.ಸಿ. ಕ್ಯಾಮರಾ ತಪಾಸಣೆ ನಡೆಸಿ ಕೃತ್ಯ ನಡೆಸಿರುವ
ಪೆರ್ಲಂಪಾಡಿಯ ಉದಯ ಎಂಬಾತನನ್ನು ಪತ್ತೆ ಹಚ್ಚಿ ಬಂಧಿಸಿದ್ದರು. ಆತನನ್ನು ಇಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಆರೋಪಿಗೆ ಸೆ.12 ರವರೆಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದುಬಂದಿದೆ.