ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 11ಎ, 11ಬಿ, 111ಎ, 111 ಬಿ, ಪ.ಜಾತಿ /ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ : 04-10-2025 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದು.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ – ಪ್ರವರ್ಗ 1, ಎಸ್.ಸಿ ಮತ್ತು ಎಸ್.ಟಿ ರೂ. 2.50 ಲಕ್ಷ., ಪ್ರವರ್ಗ Ilಎ, 11 ಬಿ, 111ಎ, 111 ಬಿ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರೂ.1 ಲಕ್ಷ.















ಅರ್ಜಿಯನ್ನು https://shp.karnataka.gov.in/bcwd ನಲ್ಲಿ ಸಲ್ಲಿಸಬಹುದು.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in/ ನ್ನುನೋಡಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿ ದೇವರಾಜ ಅರಸು ಭವನ ಕೊಡಿಯಾಲ್ ಬೈಲ್ ಸುಳ್ಯ ಇವರನ್ನು ಸಂಪರ್ಕಿಸಬಹುದು.










