ಬಿಜೆಪಿ ಸುಳ್ಯ ಮಂಡಲದ ಎಸ್‌ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಎರಟಾಡಿ ಕೊರಗಪ್ಪ ಐ(೫೫ವ.)ಅವರು ಅಲ್ಪಕಾಲದ ಅನಾರೋಗ್ಯದಿಂದ ಸೆ.10ರಂದು ಮಂಗಳೂರಿನ ಸ್ವಗೃಹದಲ್ಲಿ ನಿಧನರಾದರು.
ಸೆ.7ರಂದು ಹಠಾತ್ ಅನಾರೋಗ್ಯಕ್ಕೆ ಒಳಗಾಗಿದ್ದ ಕೊರಗಪ್ಪ ಅವರನ್ನು ಚಿಕಿತ್ಸೆಗೆ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಬಳಿಕ ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರಿನ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸೆ.10ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕೊರಗಪ್ಪ ಅವರು ಬಿಜೆಪಿಯಲ್ಲಿ 35 ವರ್ಷಗಳಿಂದ ಸಕ್ರೀಯವಾಗಿ ತೊಡಗಿಕೊಂಡಿದ್ದು ಪಕ್ಷದ ಬೂತ್ ಸಮಿತಿ ಅಧ್ಯಕ್ಷರಾಗಿ, ಶಕ್ತಿಕೇಂದ್ರದ ಸಹಪ್ರಮುಖರಾಗಿ, ರಾಮಕುಂಜ ಗ್ರಾ.ಪಂ.ಗೆ 3 ಅವಧಿಗೆ ಸದಸ್ಯರಾಗಿ, ಗ್ರಾ.ಪಂ.ಉಪಾಧ್ಯಕ್ಷರಾಗಿ, ಪುತ್ತೂರು ಎಪಿಎಂಸಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಹಳೆನೇರೆಂಕಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ಹಳೆನೇರೆಂಕಿ ಸರಕಾರಿ ಹಿ.ಪ್ರಾ.ಶಾಲೆ ಹಳೆವಿದ್ಯಾರ್ಥಿ ಸಂಘ, ಶಾಲಾ ಎಸ್‌ಡಿಎಂಸಿ, ಹಳೆನೇರೆಂಕಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಶಶಿಕಲಾ, ಪುತ್ರ ರೋಹಿತ್, ಪುತ್ರಿ ಧನ್ಯಾರನ್ನು ಅಗಲಿದ್ದಾರೆ. ಮಾಜಿ ಸಚಿವ ಎಸ್.ಅಂಗಾರ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಹಿತ ಬಿಜೆಪಿಯ ಹಲವು ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದರು.

























