ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ ‘ಸಪ್ತರ್ಷಿ 2025’ ಇದರ ಅಂಗವಾಗಿ ಖ್ಯಾತ ಮನೋವಿಶ್ಲೇಷಕ ದಿ. ಗಂಗಾಧರ ಬೆಳ್ಳಾರೆ ಸ್ಮರಣಾರ್ಥ ಸ್ವ ವಿಶ್ಲೇಷಣೆ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು.
ಜೇಸಿಐ ವಲಯ ತರಬೇತುದಾರ, ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂoತಾರು ಕಾರ್ಯಗಾರವನ್ನು ಉದ್ಘಾಟಿಸಿ ತರಬೇತಿ ನೀಡಿದರು.
ಜೇಸಿಐ ವಲಯ 15ರ ವಲಯ ಸಂಯೋಜಕ ಬಶೀರ್ ಯು ಪಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು ಅಧ್ಯಕ್ಷತೆ ವಹಿಸಿದ್ದರು.















ನಿಕಟಪೂರ್ವಾಧ್ಯಕ್ಷ ಜಗದೀಶ್ ರೈ ಪೆರುವಾಜೆ, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಗಗನ್ ಎಂ ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವಾಧ್ಯಕ್ಷೆ ನಿರ್ಮಲ ಜಯರಾಮ್ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್ ಮಣಿಕ್ಕಾರ ವಂದಿಸಿದರು.
ವರದಿ : ಉಮೇಶ್ ಮಣಿಕ್ಕಾರ










