








ಕೊಳಂಬಳದಲ್ಲಿ ರಿಕ್ಷಾದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂದಿಸಿದ ಘಟನೆ ನಡೆದಿದೆ.
ಬೆಳ್ಳಾರೆಯ ಕೊಳಂಬಲ ಎಂಬಲ್ಲಿ ರಿಕ್ಷಾ ದಲ್ಲಿ ಅಕ್ರಮವಾಗಿ ದನವನ್ನು ಸಾಗಾಟ ಮಾಡುತ್ತಿದ್ದ ರಿಕ್ಷಾ ಚಾಲಕ ಅಬ್ದುಲ್ ಸಮಾದ್ ಎಂಬತನನ್ನು ರಿಕ್ಷಾ ಸಮೇತ ಪೊಲೀಸರು ಬಂಧಿಸಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ದನ ಖರೀದಿ ಮಾಡಿದ
ಇಸುಬು ಚೆನ್ನಾವರ ಮತ್ತು ಮಾರಾಟ ಮಾಡಿದ ಆರೋಪಿ ತಲೆಮರೆಸಿಕೊಂಡಿದ್ದು ಅವರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.










