ಸುಳ್ಯ ಎನ್ ಎಂ.ಸಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಹಿತಿ ಕಾರ್ಯಗಾರ

0

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜು ಮಾನವಿಕ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಹಿತಿ ಕಾರ್ಯಕ್ರಮ ಸೆ. 11ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್.ಎಮ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಹಾಗೂ ರಾಜ್ಯ ಮಟ್ಟದ ತರಬೇತುದಾರರಾದ ಪ್ರಶಾಂತ್ ನೀಲಾವರ ಆಗಮಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಾದ IAS, IPS, KAS, Banking, ಮತ್ತಿತರ ಪರೀಕ್ಷೆಗಳಿಗೆ ತಯಾರಿ ನಡೆಸುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದ ಸಂಯೋಜಕರಾದ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕರಾದ ಡಾ. ಮಮತಾ ಕೆ ಪ್ರಾಸ್ತಾವಿಕ ನಮಾತುಗಳೊಂದಿಗೆ ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ವಿಷ್ಣು ಪ್ರಶಾಂತ್.ಬಿ ವಂದಿಸಿದರು. ಅಂತಿಮ ಬಿ.ಎ ವಿದ್ಯಾರ್ಥಿನಿ ಕು. ಶ್ರೀಲಯ ಪ್ರಾರ್ಥಿಸಿದರು. ಅಂತಿಮ ಬಿ. ಎ ವಿದ್ಯಾರ್ಥಿನಿ ಮುನಿಷಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಕಾಲೇಜಿನ ಬೋಧಕ ಬೋಧಕೇತರ ವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.