







ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ಬೆಳ್ಳಾರೆ ಇದರ ವಾರ್ಷಿಕ ಮಹಾಸಭೆಯು ಸೆ.14 ರಂದು ಬೆಳಿಗ್ಗೆ ಬೆಳ್ಳಾರೆ ದೇವಿ ಹೈಟ್ಸ್ ನಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅತಿಥಿಗಳಾಗಿ ದ.ಕ.ಜಿಲ್ಲಾ ಮೂಲ್ಯರ ಯಾನೆ ಮಾತೃ ಸಂಘದ ಜಿಲ್ಲಾಧ್ಯಕ್ಷ ಮಯೂರ್ ಉಳ್ಳಾಲ್ ,ಕುಂದಾಪುರ ಸರಕಾರಿ ಕೈಗಾರಿಕಾ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಪ್ರಫುಲ್ಲ ಕೆ.ಎಸ್ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.
ಸಂಘದ ಸದಸ್ಯರು,ಸ್ವಜಾತಿ ಬಾಂಧವರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸಹಕಾರ, ಸಲಹೆಗಳನ್ನಿತ್ತು ಮಹಾಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ಮತ್ತು ಕಾರ್ಯದರ್ಶಿ ಧನಂಜಯ ಕುಲಾಲ್ ತಿಳಿಸಿದ್ದಾರೆ.










