ಬಾಲಕರ ವಿಭಾಗದಲ್ಲಿ ಕೆ.ಎಸ್ ಗೌಡ ನಿಂತಿಕಲ್ಲು ಪ್ರಥಮ
ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರಥಮ

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮಂಗಳೂರು, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಸೆ. 9ರಂದು ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಪಂದ್ಯಾಕೂಟವನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಭಾಗೀರಥಿ ಉದ್ಘಾಟಿಸಿ, ಶುಭ ಹಾರೈಸಿದರು.









ಸಭಾಧ್ಯಕ್ಷತೆ ವಹಿಸಿದ್ದ ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರಮೂಕಮಲೆ ಅಂಕಣವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ತುಕಾರಾಂ ಯೇನೆಕಲ್ಲು, ಗುತ್ತಿಗಾರು ವಲಯದ ಸಮೂಹ ಸಂಪನ್ಮೂಲ ವ್ಯಕ್ತಿಯಾದ ಕುಶಲಪ್ಪ ಗೌಡ, ಸುಳ್ಯ ತಾಲೂಕಿನ ದೈಹಿಕ ನಿರ್ದೇಶನ ಕ್ರೀಡಾ ಸಂಯೋಜಕಿ ಶ್ರೀಮತಿ ಶಾಂತಿಪ್ರಸಾದ್, ಕಾಲೇಜಿನ ಸಿ.ಬಿ.ಸಿ ಅಧ್ಯಕ್ಷ ವಿಶ್ವನಾಥ, ಕಾಲೇಜಿನ ಎಸ್.ಡಿ.ಎಂ.ಸಿ ಅಧ್ಯಕ್ಷ ಕೇಶವ ಕಾಂತಿಲ, ಸದಸ್ಯರು, ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಚೆನ್ನಮ್ಮ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಉಪಸ್ಥಿತರಿದ್ದರು. ಪ್ರಾಂಶುಪಾಲೆ ಶ್ರೀಮತಿ ಚೆನ್ನಮ್ಮ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ವಂದಿಸಿದರು. ಇತಿಹಾಸ ಉಪನ್ಯಾಸಕಿ ಶ್ರೀಮತಿ ಪ್ರೀತಿ ರೈ ಕಾರ್ಯಕ್ರಮವನ್ನು ನಿರೂಪಿಸಿದರು. ಬಾಲಕರ ವಿಭಾಗದಲ್ಲಿ ಕೆ.ಎಸ್ ಗೌಡ ನಿಂತಿಕಲ್ಲು ಪ್ರಥಮ ಸ್ಥಾನವನ್ನು ಹಾಗೂ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.










