ಕೆ .ವಿ .ಜಿ. ಐ ಟಿ ಐ ಸುಳ್ಯ : ಪ್ರವೇಶಾತಿ ವಿಸ್ತರಣೆ

0

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತರ ಸುತ್ತೋಲೆಯಂತೆ ರಾಜ್ಯದ ಸರಕಾರಿ, ಅನುದಾನಿತ ಮತ್ತು ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ 2025 ನೇ ಸಾಲಿನ ಪ್ರವೇಶಾತಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆ.ವಿ.ಜಿ.ಐಟಿಐ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಮೆಕಾನಿಕ್ ವಿಭಾಗದಲ್ಲಿ ಕೆಲವೇ ಸೀಟುಗಳು ಬಾಕಿ ಉಳಿದಿವೆ. ಅರ್ಹತೆ ಇರುವ ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 30 ರ ಒಳಗಾಗಿ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬೇಕಾಗಿ ವಿನಂತಿ. ಈ ಅವಕಾಶವನ್ನು ಸದುಪಯೋಗಪಡಿಸಿ ಕೊಳ್ಳುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.