ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡು ಕೂಟ

0

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡು ಕೂಟ ಸೆ.13 ರಂದು ನಡೆಯಿತು.

ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಶಾಂತಿನಗರ ಇದರ ಸದಸ್ಯರಿಂದ ಭಜನಾ ಸೇವೆ ನಡೆಯಿತು. ಸಾಕ್ಸೋಫೋನ್ ವಾದಾನ ನಡೆಯಿತು.

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ವ್ಯವಸ್ಥಾಪನ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು, ಬೈಲುವಾರು ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಪಾಲ್ಗೊಂಡಿದ್ದರು.