ಸಂಪಾಜೆ ಸಂಯುಕ್ತ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

0


ನಾಪೋಕ್ಲುವಿನಲ್ಲಿ ನಡೆದ ಮಡಿಕೇರಿ ತಾಲೂಕು ಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಸಂಪಾಜೆ ಸಂಯುಕ್ತ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಪಿಯುಸಿ ವಿಭಾಗದ ವಿದ್ಯಾರ್ಥಿ ದೀನ್ ರಾಜ್ ಬಿ.ಜೆ. ಪ್ರಥಮ ಪಿಯುಸಿ ಇವರು ಗುಂಡೆಸೆತ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಹಾಗೂ ಮೂರು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಾಂಪಿಯನ್ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.