








ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ. ಜಿಲ್ಲೆ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಆಶ್ರಯದಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿ ಸೆ. 14ರಂದು ನಡೆದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ಶೋಭಾ ಬೆಳ್ಳಾರೆಯವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ. ಕವಿಗೋಷ್ಠಿಯ ಅಧ್ಯಕ್ಷ ನಾರಾಯಣ ರೈ ಕುಕ್ಕುವಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಹೆಚ್. ಭೀಮರಾವ್ ವಾಷ್ಟರ್ ಈ ಪ್ರಶಸ್ತಿ ಪ್ರದಾನ ಮಾಡಿದರು. ಶೋಭ ಬೆಳ್ಳಾರೆಯವರು ಚಲನಚಿತ್ರದಲ್ಲೂ ನಟನೆ ಮಾಡಿರುತ್ತಾರೆ.










