ಪೋಷಣ್ ಮಾಸಾಚರಣೆ ಕಾರ್ಯಕ್ರಮ
ಪುಟಾಣಿ ಮಕ್ಕಳಿಗೆ ಅನ್ನ ಪ್ರಾಶನ ಹಾಗೂ ಗರ್ಭಿಣಿ ಸ್ತ್ರೀಯರಿಗೆ ಸೀಮಂತದ ವಿಶೇಷ ಕಾರ್ಯಕ್ರಮ
ದ. ಕ. ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ಕೋಲ್ಚಾರು ಇದರ ಆಶ್ರಯದಲ್ಲಿ ನೂತನವಾಗಿ ಪ್ರಾರಂಭಗೊಂಡ ಎಲ್.ಕೆ. ಜಿ ಮತ್ತು ಯು. ಕೆ. ಜಿ ತರಗತಿಗಳ ಪ್ರಾರಂಭೋತ್ಸವ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮ ವು ಶ್ರೀ ಶಾರದಾಂಬಾ ಸಭಾಭವನದಲ್ಲಿ ಸೆ. 16 ರಂದು ನಡೆಯಿತು.
ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಸಂಧ್ಯಾ ಕೊಲ್ಲರಮೂಲೆ ಅಧ್ಯಕ್ಷತೆ ವಹಿಸಿದ್ದರು. ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ ವಸಂತ ಆಲೆಟ್ಟಿ ಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.









ಮುಖ್ಯ ಅತಿಥಿಯಾಗಿ ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ರವರು ಎಲ್. ಕೆ. ಜಿ ಮತ್ತು ಯು. ಕೆ. ಜಿ ತರಗತಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ದಿನೇಶ್ ಕಣಕ್ಕೂರು, ಧರ್ಮಪಾಲ ಕೊಯಿಂಗಾಜೆ, ಶಂಕರಿ ಕೊಲ್ಲರಮೂಲೆ, ಆಲೆಟ್ಟಿ ಸೊಸೈಟಿ ಮಾಜಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಸಿ. ಡಿ. ಪಿ. ಒ. ಇಲಾಖೆಯ ಮೇಲ್ವಿಚಾರಕಿ ದೀಪಿಕಾ, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಸುದರ್ಶನ ಪಾತಿಕಲ್ಲು, ಶಾಲಾ ಮುಖ್ಯ ಶಿಕ್ಷಕ ಚಿನ್ನಸ್ವಾಮಿ, ಶಾರದಾಂಬ ಭಜನಾ ಮಂದಿರದ ಅಧ್ಯಕ್ಷ ಪ್ರದೀಪ್ ಕೊಲ್ಲರಮೂಲೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡಲಾಯಿತು. ವಿಶೇಷವಾಗಿ ಪುಟಾಣಿ ಮಕ್ಕಳಿಗೆ ಪೋಷಕರಿಂದ ಅನ್ನ ಪ್ರಾಶನ ನೀಡುವ ಹಾಗೂ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಮಾಡುವ ಕಾರ್ಯಕ್ರಮ ನಡೆಸಲಾಯಿತು. ಪೌಸ್ಟಿಕ ಆಹಾರ ಪದಾರ್ಥ ಗಳ ಪ್ರದರ್ಶನವು ನಡೆಯಿತು. ಅಂಗನವಾಡಿ ಮಕ್ಕಳು ಪ್ರಾರ್ಥನೆ ನೆರವೇರಿಸಿದರು.
ಅಂಗನವಾಡಿ ಕಾರ್ಯಕರ್ತೆ ರತ್ನಾವತಿ ವಾಲ್ತಾಜೆ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಸಂಘದ ಸದಸ್ಯೆ ಚಂಚಲಾಕ್ಷಿ ವಂದಿಸಿದರು.
ಶಿಕ್ಷಕಿ ವಿನುತ ಕೊಲ್ಚಾರ್ ಕಾರ್ಯಕ್ರಮ ನಿರೂಪಿಸಿದರು. ಬಾಲ ವಿಕಾಸ ಸಮಿತಿಯ ಸದಸ್ಯರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು,ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ವಿದ್ಯಾಭಿಮಾನಿಗಳು ಭಾಗವಹಿಸಿದರು.










