ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು
ಸುಳ್ಯದಲ್ಲಿ ಹೋಮ್ ಗಾರ್ಡ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೆ 17 ರಂದು ಮುಂಜಾನೆ ನಡೆದಿದೆ.















ಪ್ರಭಾಕರ ಪೈ ಎಂಬುವವರು
ಮಾನಸಿಕ ಖಿನ್ನತೆಗೆ ಒಳಗಾಗಿ ಆ್ಯಸಿಡ್ ಸೇವಿಸಿದ್ದಾರೆ ಎಂದು ಹೇಳಲಾಗಿದ್ದು ಮನೆಯವರು ತಕ್ಷಣ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಲೆಟ್ಟಿ ಗ್ರಾಮದ ಅಂಜಿಕರ್ ಪ್ರಭಾಕರ ಪೈ ಅವರು ಕೆಲವು ವರ್ಷಗಳಿಂದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಕಳೆದ ಒಂದು ವರ್ಷದಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದರು.










