ಸುಳ್ಯ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಜೇನು ಕೃಷಿ ತರಬೇತಿ

0

ತೋಟಗಾರಿಕಾ ಇಲಾಖೆ ಸುಳ್ಯ ಹಾಗೂ ಲಯನ್ಸ್ ‌ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಜೇನು ಕೃಷಿ ತರಬೇತಿ ಕಾರ್ಯಕ್ರಮ ಸೆ.17ರಂದು ಸುಳ್ಯದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ನಗರ ಪಂಚಾಯತ್ ಅಧ್ಯಕ್ಷ ಶಶಿಕಲಾ‌ ನೀರಬಿದಿರೆ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್ ಸಿ. ಆಗಮಿಸಿದ್ದರು.

ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿ ಮಲ್ಲಿಕಾರ್ಜುನ ಪ್ರಸಾದ್, ಕೋಶಾಧಿಕಾರಿ ಜತ್ತಪ್ಪ ರೈ ವೇದಿಕೆಯಲ್ಲಿ ಇದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕ್ ಪಡ್ಪು, ಕೀರ್ತನ್ ಶೇಖ್ ಭಾಗವಹಿಸಿದ್ದರು. 100 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗವಹಿಸಿದ್ದರು.