














ಜೀರ್ಣೋದ್ಧಾರಗೊಳ್ಳುತ್ತಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಸೆ. 21ರಿಂದ ಅ. 1ರ ತನಕ ನಡೆಯಲಿದ್ದು, ಆಮಂತ್ರಣವನ್ನು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಮಠಾಧೀಶರಾದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಸೆ. 17ರಂದು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು, ಪ್ರಧಾನ ಕಾರ್ಯದರ್ಶಿ ಕುಶಾಲಪ್ಪ ಗೌಡ ಮಣಿಮಜಲು, ಕರುಣಾಕರ ಗೋಕಟೆ ನಾಡೋಳಿ ಕಡಬ, ಪದ್ಮನಾಭ ಚೂಂತಾರು ಉಪಸ್ಥಿತರಿದ್ದರು.










