ಶೇ. 100 ಫಲಿತಾಂಶ ದಾಖಲಿಸಿದ ಶಾರದಾ ಪದವಿಪೂರ್ವ ಕಾಲೇಜಿಗೆ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಸನ್ಮಾನ

0

ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ದಕ್ಷಿಣ ಕನ್ನಡ ಪದವಿ ಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘ ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಕಲ್ಲಬೆಟ್ಟು, ಮೂಡಬಿದಿರೆ ಇಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಶೇ. ೧೦೦ ಫಲಿತಾಂಶ ದಾಖಲಿಸಿದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.


ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸತತವಾಗಿ ಮೂರು ವರ್ಷದಿಂದ ಶೇಕಡ ೧೦೦ ಫಲಿತಾಂಶವನ್ನು ದಾಖಲಿಸುತ್ತಾ ಬಂದಿದೆ. ೨೦೨೪- ೨೫ ನೇ ಸಾಲಿನಲ್ಲಿ ಶೇಕಡ ೧೦೦ ಫಲಿತಾಂಶವನ್ನು ಪಡೆದುಕೊಂಡಿರುವುದಕ್ಕೆ ಸಂಸ್ಥೆಯ ಉಪನ್ಯಾಸಕರನ್ನು ಕರ್ನಾಟಕ ಘನ ಸರಕಾರದ ವಿಧಾನ ಪರಿಷತ್ತಿನ ಸದಸ್ಯ ಭೋಜೇಗೌಡರು ಸನ್ಮಾನಿಸಿದರು. ಕರ್ನಾಟಕ ಸರಕಾರದ ಶಿಕ್ಷಕರ ನಿಧಿಯಿಂದಲೂ ಶೇಕಡ ೧೦೦ ಫಲಿತಾಂಶ ದಾಖಲಿಸಿರುವುದಕ್ಕೆ ನಗದು ಬಹುಮಾನವಾಗಿ ರೂಪಾಯಿ ೫೦,೦೦೦ ವನ್ನು ಪಡೆದುಕೊಂಡಿದ್ದಾರೆ.