ಸುಳ್ಯ : ಜೂನಿಯರ್ ಕಾಲೇಜ್ ಅವರಣದ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿಕೊಡುವಂತೆ ವಿಧಾನ ಸಭಾಧ್ಯಕ್ಷರಿಗೆ ಮನವಿ

0

ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಜಮೀನಿನಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವು ಗೊಳಿಸುವಂತೆ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಮಹೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ ಎಂ ಮುಸ್ತಫಾ ಜನತಾ ರವರು ಮನವಿ ಸಲ್ಲಿಸಿದ್ದಾರೆ.

ಮನವಿ ಸ್ವೀಕರಿಸಿದ ಸ್ಪೀಕರ್ ಯು ಟಿ ಖಾದರ್ ರವರು ಪುತ್ತೂರು ಉಪ ವಿಭಾಗದ ಮೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಗೆ ದೂರವಾಣಿ ಮೂಲಕ ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿ, ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ )ಕೆ. ಎಂ. ಮುಸ್ತಫ, ಸಮಿತಿ ನಿರ್ದೇಶಕ ರು ಹಾಗೂ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್ ಉಪಸ್ಥಿತರಿದ್ದರು.