ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್‌ (MEA) ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ

0

ಕೆ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಶನ್ MEA ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ಸೆಪ್ಟೆಂಬರ್: 19 ರಂದು ನಡೆಯಿತು.

ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ರಾಘವೇಂದ್ರ ಬಿ. ಕಾಮತ್ “AI Tools for self learning” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕಾಲೇಜಿನ ಸಿ.ಇ.ಒ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು ಮತ್ತು ವಿ.ಟಿ.ಯು ಕಾರ್ಯಕಾರಿ ಮಂಡಳಿ ಸದಸ್ಯರಾದ ಡಾ. ಉಜ್ವಲ್ ಯು.ಜೆ. ಗೌರವ ಅತಿಥಿ ನೆಲೆಯಲ್ಲಿ ಮಾತನಾಡುತ್ತಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದವರು AI ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಮುಂದಿನ ಭವಿಷ್ಯಕ್ಕೆ ತಯಾರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಹರ್ಷ ಕುಮಾರ್ ಬಿ, ಮಹಿಪಾಲ್ ಸಿಂಗ್, ಚಿರಾಗ್ ಮತ್ತು ಪ್ರೇಮ್ ಕುಮಾರ್ ಅವರ ತಂಡ ಕಾರ್ಯಕ್ರಮವನ್ನು ಸಂಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಟ್ರೈನಿಂಗ್ & ಪ್ಲೇಸ್‌ಮೆಂಟ್ ಆಫೀಸರ್ ಪ್ರೊ. ಪ್ರಶಾಂತ್ ಕೆ. ಡಾಕ್ಟರ್ ಸುನಿಲ್ ಕುಮಾರ್, ಪ್ರೊ. ಅಭಿಜ್ಞಾ ಬಿ.ಬಿ., ಪ್ರೊ. ಸುಧೀರ್ ಕೆ.ವಿ., ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.