ಸೆ. 21 – ಅ. 1: ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಬೆಳ್ಳಾರೆಯ ಗೌರಿಪುರಂ
ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸೆ. 21ರಂದು ಮೊದಲ್ಗೊಂಡು ಅ. 1ರ ತನಕ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.
ಪ್ರತಿದಿನ ಸಂಜೆ 6.00 ಗಂಟೆಯಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಶ್ರೀ ರಾಜರಾಜೇಶ್ವರಿ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸೆ. 26ರಂದು ವಿಶೇಷವಾಗಿ ಶ್ರೀ ಕ್ಷೇತ್ರದ ತಂತ್ರಿಗಳಾದ ಕುನ್ನತ್ತಿಲ್ ಬ್ರಹ್ಮಶ್ರೀ ತಂತ್ರಿ ಮುರಳಿಕೃಷ್ಣ ನಂಬೂದರಿಯವರ ನೇತೃತ್ವದಲ್ಲಿ ಬೆಳಿಗ್ಗೆ 7.00ರಿಂದ ಗಣಪತಿ ಹವನ, ವಾಹನಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ, ಸಂಜೆ 5.30ರಿಂದ ಶ್ರೀಚಕ್ರ ದುರ್ಗಾಪೂಜೆ ನಡೆಯಲಿದೆ. ರಾತ್ರಿ 8.00 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿದ್ದು, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಇವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯ.ಸ. ಅಧ್ಯಕ್ಷ ಹರೀಶ್ ಇಂಜಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಹೆಗ್ಡೆ ನಡುಮಜಲು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.